ಜ.12ರಂದು ಡಾ. ಎಂ.ವೀರಪ್ಪ ಮೊಯ್ಲಿಯವರ 'ವಿಶ್ವ ಸಂಸ್ಕೃತಿಯ ಮಾಹಾಯಾನ ಸಂಪುಟ- 2' ' ಕೃತಿ ಬಿಡುಗಡೆ

Update: 2025-01-11 07:12 GMT

ಮೂಡುಬಿದಿರೆ: ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ರಚಿಸಿದ 'ವಿಶ್ವಸಂಸ್ಕೃತಿಯ ಮಹಾಯಾನ ಸಂಪುಟ- 2' ಗದ್ಯ ಮಹಾಕಾವ್ಯ ಜ.12ರಂದು ಪೂರ್ವಾಹ್ನ 11ಕ್ಕೆ ಮೂಡುಬಿದಿರೆ ವಿದ್ಯಾಗಿರಿಯ ಡಾ.ಎ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹಾಗೂ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಸ್ವಪ್ನ ಬುಕ್ ಹೌಸ್ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ ಸಿ. ನಾಗಣ್ಣ ಗ್ರಂಥ ಬಿಡುಗಡೆ ಮಾಡುವರು. ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ. ಬಿ.ಎ ವಿವೇಕ ರೈ ಆಶಯ ನುಡಿಗಳನ್ನಾಡುವರು.

ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಸಾಹಿತಿ ಡಾ. ಕಬ್ಬಿನಾಲೆ ವಸಂತ ಭಾರಧ್ವಾಜ್ ಗ್ರಂಥದ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

ಈ ಕೃತಿಯು ವಿಶ್ವದ 17 ಸಂಸ್ಕೃತಿಯನ್ನು ಪರಿಚಯಿಸಲಿದೆ.

ಸುದ್ದಿಗೋಷ್ಠಿಯಲ್ಲಿ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News