ಜ.14: ʼಬಾಪ ನಟ್ಟೊ ಮರʼ ಪುಸ್ತಕ ಬಿಡುಗಡೆ
ಮಂಗಳೂರು, ಜ.13: ಬ್ಯಾರಿ ಎಲ್ತ್‌ಕಾರ್-ಕಲಾವಿರಮಾರೊ ಕೂಟ (ಮೇಲ್ತೆನೆ) ಪ್ರಕಟಿಸಿದ, ಕವಿ ಆಲಿಕುಂಞಿ ಪಾರೆ ರಚಿಸಿದ ʼಬಾಪ ನಟ್ಟೊ ಮರʼ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜ.14ರಂದು ಅಪರಾಹ್ನ 3ಕ್ಕೆ ದೇರಳಕಟ್ಟೆಯ ವಿದ್ಯಾರತ್ನ ಸ್ಕೂಲ್‌ನಲ್ಲಿ ನಡೆಯಲಿದೆ.
ಸೈಯದ್ ಮುಕ್ತಾರ್ ತಂಙಳ್ ಕುಂಬೋಳ್ ಪುಸ್ತಕ ಬಿಡುಗಡೆಗೊಳಿಸಲಿದ್ದು, ಸ್ಪೀಕರ್ ಯು.ಟಿ.ಖಾದರ್, ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಬ್ಯಾರಿ ಅಧ್ಯಯನ ಪೀಠದ ಸಂಚಾಲಕ ಡಾ. ಅಬೂಬಕರ್ ಸಿದ್ದೀಕ್, ವಿದ್ಯಾರತ್ನ ಸ್ಕೂಲ್‌ನ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಪಾರೆ ಕುಟುಂಬದ ಹಿರಿಯ ಸದಸ್ಯ ಅಬೂಸ್ವಾಲಿಹ್ ಪಾರೆ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಬಿ.ಎ. ಮುಹಮ್ಮದಲಿ ಕಮ್ಮರಡಿ ಪುಸ್ತಕ ಪರಿಚಯಿಸಲಿದ್ದಾರೆ. ಬಳಿಕ ಮದನಿ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಇಸ್ಮಾಯೀಲ್ ಟಿ. ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹೀಂ ನಡುಪದವು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.