ಎ.14ರಂದು ಅಸೈಗೋಳಿ ಕೇಂದ್ರ ಮೈದಾನದಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

ಉಳ್ಳಾಲ: ಸಂವಿಧಾನ ಶಿಲ್ಫಿ ಡಾ.ಬಿ.ಆರ್ ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ, ಉಳ್ಳಾಲ ಇದರ ವತಿಯಿಂದ ಪಂಚಮ ವರ್ಷದ ಆಚರಣೆ ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯು ಎ.14ರ ಸೋಮವಾರ ಬೆಳಿಗ್ಗೆ 9.30 ಅಸೈಗೋಳಿ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ ಇದರ ಅಧ್ಯಕ್ಷರಾದ ಯಾದವ ಅಸೈಗೋಳಿ ತಿಳಿಸಿದ್ದಾರೆ.
ಅವರು ಗುರುವಾರದಂದು ತೊಕ್ಕೊಟ್ಟು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಳ್ಳಾಲ ಹಾಗೂ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜೀವನ ಚರಿತ್ರೆಯ ಕುರಿತು ನಡೆದ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿರುವ ವಿದ್ಯಾರ್ಥಿಳಿಗೆ ಸನ್ಮಾನ ಹಾಗೂ ವಿವಿಧ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತ ರಾದ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟನೆಯನ್ನು ಸಭಾಧ್ಯಕ್ಷರಾದ ಯು.ಟಿ. ಖಾದರ್ ನೆರವೇರಿಸಲಿದ್ದಾರೆ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್ ಈಶ್ವರ್ ನಡೆಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಬಾಲಕರ ಬಾಲ ಮಂದಿರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಡಗು ಇದರ ಅಧೀಕ್ಷಕರಾದ ಶ್ರೀಧರ ಕೆ. ಎನ್ ವಹಿಸಲಿದ್ದಾರೆ.
ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದಾಮೋದರ್, ನ್ಯಾಯವಾದಿಗಳಾದ ಪ್ರತ್ಯೇಶ ರಾವ್, ಕೊಣಾಜೆ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಶೌಕತ್ ಅಲಿ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರು ರಾದ ಅಚ್ಯುತ್ತ ಗಟ್ಟಿ , ಕೊಣಾಜೆ ಪೋಲೀಸ್ ಸಬ್ ಇನ್ವೆಕ್ಟರ್ ನಾಗರಾಜ್ ನಾಯ್ಕ ಮತ್ತಿರರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಜೈ ಭೀಮ್ ಕಲಾ ತಂಡ ವಿಟ್ಲ ಇದರ ಸ್ಥಾಪಾಕಾಧ್ಯಕ್ಷರಾದ ಪ್ರಸಾದ್ ಅನಂತಾಡಿ, ಕುಂಟಲಗುರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಚಂದ್ರಿಕಾ, ಸಂವಿಧಾನ ಶಿಲ್ಫಿ ಡಾ.ಬಿ.ಆರ್ ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ ಇದರ ಸದಸ್ಯರಾದ ರಹಿಮಾನ್ ಕೊಣಾಜೆ, ಸದಾನಂದ ಮಾಡೂರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.