ಜು.18ರಂದು ದ.ಕ. ಜಿಲ್ಲೆಯ ಐದು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ಮುಲ್ಲೈ ಮುಗಿಲನ್

Update: 2024-07-17 17:27 GMT

ಮಂಗಳೂರು, ಜು17: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.




 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News