ಎ.18ರ ಪ್ರತಿಭಟನೆ ಯಶಸ್ಸಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲೆ ಕರೆ
ಮಂಗಳೂರು, ಎ.16: ಕೇಂದ್ರ ಸರಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ವತಿಯಿಂದ ಎ.18ರಂದು ಅಡ್ಯಾರ್ ಕಣ್ಣೂರಿನಲ್ಲಿ ನಡೆಯುವ ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ವೆಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ಜಿಲ್ಲಾಧ್ಯಕ್ಷ ಅಲಿ ಕುಂಞಿ ಹಾಜಿ ಪಾರೆ ಅಧ್ಯಕ್ಷತೆಯಲ್ಲಿ ಕಣ್ಣೂರು ಸುನ್ನೀ ಸಂಟರಿನಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಮುಸಲ್ಮಾನರ ಕೋಟ್ಯಾಂತರ ವಕ್ಫ್ ಆಸ್ತಿಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರಕಾರ ಮುಸಲ್ಮಾನರನ್ನು ಕಬಳಿಸುವ ಹುನ್ನಾರವನ್ನು ಹೊಂದಿದೆ. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರತಿಯೊಬ್ಬ ಭಾರತೀಯನು ತಿರಸ್ಕರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ಆಯೋಜಿಸಿರುವ ಪ್ರತಿಭಟನೆಯಲ್ಲಿ ಪ್ರತಿಯೊಂದು ಯುನಿಟ್ ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ ಖತರ್ ಮನವಿ ಮಾಡಿದ್ದಾರೆ.