ಎ.18ರಂದು ನಡೆಯುವ ಪ್ರತಿಭಟನೆಗೆ ಅಖಿಲ ಭಾರತ ಬ್ಯಾರಿ ಪರಿಷತ್ ಬೆಂಬಲ
Update: 2025-04-17 23:18 IST

ಮಂಗಳೂರು, ಎ.17: ಕೇಂದ್ರ ಸರಕಾರದ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಕೋರ್ಡಿನೇಶನ್ ಕಮಿಟಿಯು ಅವಿಭಜಿತ ದ.ಕ.ಜಿಲ್ಲಾ ಖಾಝಿಗಳ ನೇತೃತ್ವದಲ್ಲಿ ಎ.18ರಂದು ಅಡ್ಯಾರ್‌ನ ಷಾ ಗಾರ್ಡನ್‌ನಲ್ಲಿ ಆಯೋಜಿಸಲಾದ ಪ್ರತಿಭಟನಾ ಸಮಾವೇಶಕ್ಕೆ ಅಖಿಲ ಭಾರತ ಬ್ಯಾರಿ ಪರಿಷತ್ ಸಂಪೂರ್ಣ ಬೆಂಬಲ ಸೂಚಿಸಿದೆ.
ಈ ಪ್ರತಿಭಟನಾ ಸಮಾವೇಶದಲ್ಲಿ ಸರ್ವರೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅಧ್ಯಕ್ಷ ಯು.ಎಚ್. ಖಾಲಿದ್ ಉಜಿರೆ ಮತ್ತು ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ನಡುಪದವು ಪ್ರಕಟನೆಯಲ್ಲಿ ತಿಳಿಸಿದೆ.