ಜ.2: ಪ್ರಧಾನಮಂತ್ರಿ ಸೂರ್ಯ ಘರ್ ಮಾಹಿತಿ ಕಾರ್ಯಾಗಾರ
ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಮತ್ತು ಮಂಗಳೂರು ಮಹಾನಗರಪಾಲಿಕೆಯ ಸಹಯೋಗದೊಂದಿಗೆ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮವು ಜ.2ರಂದು ಪೂ.11ಕ್ಕೆ ನಗರದ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ವಿ. ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಬ್ರಿಜೇಶ್ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಇಂಧನ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯಕ್, ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.