ಜ.21ರಂದು ಸುರತ್ಕಲ್ ನಲ್ಲಿ 'ಬಂಟರ ಕ್ರೀಡೋತ್ಸವ'

Update: 2024-01-18 06:26 GMT

ಸುರತ್ಕಲ್, ಜ.18: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಜ.21ರಂದು ಬೆಳಗ್ಗೆ 8:30ಕ್ಕೆ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ.

ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಡಾ.ವೈ.ಭರತ್ ಶೆಟ್ಟಿ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ, ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ತೆರಿಗೆ ಹಣಕಾಸು ನಿರ್ಧರಣೆ ಸ್ಥಾಯಿ ಸಮಿತಿಯ ಅಧ್ಯಕ್ಷ ವರುಣ್ ಚೌಟ, ಯತಾರ್ಥ್ ಸೋಶಿಯಲ್ ಸ್ಥಾಪಕಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ.

ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟರ ಮಾತೃ ಸಂಘದ ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಂಟರ ಮಾತೃ ಸಂಘದ ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಇಂಟರ್ ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಕಾರ್ಯಾಧ್ಯಕ್ಷ ದೇವಿಚರಣ್ ಶೆಟ್ಟಿ, ಸುರತ್ಕಲ್ ಪಿಎಸ್ಸೈ ಶಶಿಧರ ಶೆಟ್ಟಿ, ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ನಿಟ್ಟೆಗುತ್ತು ರವಿರಾಜ ಶೆಟ್ಟಿ, ರೋಹಿತಾಕ್ಷ ರೈ ಕುಳಾಯಿಗುತ್ತು, ಎಂ.ದೇವಾನಂದ ಶೆಟ್ಟಿ, ಉಲ್ಲಾಸ್ ಆರ್. ಶೆಟ್ಟಿ, ಸುಧಾಕರ ಎಸ್. ಪೂಂಜಾ, ಗಿರೀಶ್ ಎಂ. ಶೆಟ್ಟಿ ಕಟೀಲು, ಸಂತೋಷ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸುರತ್ಕಲ್ ಬಂಟರ ಸಂಘದ ವ್ಯಾಪ್ತಿಯಲ್ಲಿ ಕ್ರೀಡಾಕೂಟ ನಡೆಯಲಿದೆ. ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ, ಸ್ಪರ್ಧೆಯ ಜೊತೆಗೆ ಬೇರೆ ಬೇರೆ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಬೆಳಗ್ಗೆ 8:30ಕ್ಕೆ ಗ್ರಾಮವಾರು ಪಥ ಸಂಚಲನ ನಡೆಯಲಿದೆ. ಸ್ಪರ್ಧೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗ್ರಾಮಕ್ಕೆ ಚಾಂಪಿಯನ್ ಟ್ರೋಫಿ ನೀಡಲಾಗುವುದು ಎಂದು ಕ್ರೀಡಾ ಕಾರ್ಯದರ್ಶಿಗಳಾದ ಶಿಶೀರ್ ಶೆಟ್ಟಿ ಮತ್ತು ಬಬಿತಾ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News