ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ

Update: 2024-12-11 17:56 GMT

ಮಂಗಳೂರು, ಡಿ.11: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2025ರ ಜ.21ರಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ನೇರ ವಿಮಾನ ಹಾರಾಟ ಆರಂಭವಾಗಲಿದೆ.

ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ವಿಮಾನದ ಸೇವೆ ಹಾರಾಟ ಇರುತ್ತದೆ.

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು.

ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯ

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News