ಮಾ.21ರಿಂದ ಎಸೆಸ್ಸೆಲ್ಸಿ ಪರೀಕ್ಷೆ ಆರಂಭ
Update: 2025-03-20 18:10 IST

ಮಂಗಳೂರು, ಮಾ.20: ಪ್ರಸಕ್ತ ವಷರ್ದ ಎಸೆಸ್ಸೆಲ್ಸಿ ಪರೀಕ್ಷೆಯು ಮಾ.21ರಿಂದ ಆರಂಭಗೊಳ್ಳಲಿದೆ. ಜಿಲ್ಲೆಯಲ್ಲಿ 29,760 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.
ದ.ಕ. ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಎ.4ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ಜಿಲ್ಲೆಯ 521 ಶಾಲೆಗಳ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.