ಸೆ.28ರಿಂದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

Update: 2024-09-26 14:51 GMT

ಮಂಗಳೂರು, ಸೆ.26: ದ.ಕ.ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ 25 ಕ್ರೀಡಾ ಸ್ಪರ್ಧೆಗಳನ್ನು ಸೆ.28,29 ರಂದು ದ.ಕ. ಸಹಿತ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ.

ಸೆ.28ರಂದು ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕುಸ್ತಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಬಾಕ್ಸಿಂಗ್ (ಆಯ್ಕೆ), ವುಷು (ಆಯ್ಕೆ), ವೇಟ್ ಲಿಫ್ಟಿಂಗ್ (ಆಯ್ಕೆ), ಟೇಕ್ವೊಂಡೊ (ಆಯ್ಕೆ) ಸ್ಫರ್ಧೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಮತ್ತು ಫುಟ್‌ಬಾಲ್, ಹ್ಯಾಂಡ್ ಬಾಲ್ ಸ್ಪರ್ಧೆಯು ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಆರ್ಚರಿ (ಆಯ್ಕೆ), ಫೆನ್ಸಿಂಗ್ (ಆಯ್ಕೆ) ಬೆಂಗಳೂರು ನಗರದ ಶ್ರೀ ಕಂಠೀರವ ಕ್ರೀಡಾಂಗಣ, ಹಾಕಿ, ಯೋಗ, ಜಿಮ್ನಾಸ್ಟಿಕ್ಸ್ (ಆಯ್ಕೆ) ಕೂಡಿಗೆಯ ಕ್ರೀಡಾ ಶಾಲೆಯಲ್ಲಿ ಮತ್ತು ವಾಲಿಬಾಲ್, ಕಬಡ್ಡಿ ಪಂದ್ಯವು ಉಡುಪಿ ಜಿಲ್ಲಾ ಕ್ರೀಡಾಂಗಣ ದಲ್ಲಿ ನಡೆಯಲಿದೆ.

ಸೆ.29ರಂದು ಬಾಸ್ಕೆಟ್‌ಬಾಲ್ ಪಂದ್ಯವು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ, ಟೇಬಲ್ ಟೆನ್ನಿಸ್, ಈಜು, ಟೆನ್ನಿಸ್ ಪಂದ್ಯವು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಖೋ-ಖೋ, ನೆಟ್‌ಬಾಲ್ ಪಂದ್ಯವು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ, ಜೂಡೋ (ಆಯ್ಕೆ) ಚಿಕ್ಕಮಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಪಟುಗಳು ಸ್ಪರ್ಧೆ ನಡೆಯುವ ದಿನಗಳಂದು ಬೆಳಗ್ಗೆ 8 ಗಂಟೆಯೊಳಗೆ ಸ್ಪರ್ಧೆ ನಡೆಯುವ ಸ್ಥಳಗಳಲ್ಲಿ ಹಾಜರಿರ ಬೇಕು.ಈಗಾಗಲೇ ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ತಂಡ ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಸಬಹುದು.

ಉಳಿದಂತೆ ಆಯ್ಕೆ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೇರವಾಗಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ (ದೂ.ಸಂ: 0824-2451264)ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News