ಡಿ.28ರಂದು ಮಂಗಳೂರು ಕಂಬಳ
ಮಂಗಳೂರು: 'ಮಂಗಳೂರು ಕಂಬಳ'ವು ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ, ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ. ಕೆ. ಪ್ರಕಾಶ್ ಶೆಟ್ಟಿ ಗೌರವ ಅಧ್ಯಕ್ಷತೆಯಲ್ಲಿ ಮಂಗಳೂರು ಕಂಬಳವು ಡಿ.28ರ ಬೆಳಗ್ಗೆ 08.30ಕ್ಕೆ ಉದ್ಘಾಟನೆ ಕಾರ್ಯಕ್ರ ಮದ ಮೂಲಕ ಪ್ರಾರಂಭಗೊಂಡು ಅದೇ ದಿನ ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ಹಾಗೂ ಮರುದಿನ ಬೆಳಗ್ಗೆ 9ಕ್ಕೆ ಬಹುಮಾನ ವಿತರಣಾ ಸಮಾ ರಂಭದ ಮೂಲಕ ಸಂಪನ್ನಗೊಳ್ಳಲಿದೆ ಎಂದು ಸಂಸದ ಹಾಗೂ ಕಂಬಳ ಸಮಿತಿಯ ಅಧ್ಯಕ್ಷ ಬೃಜೇಶ್ ಚೌಟ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆಯು ಕಾಲಕ್ರಮೇಣ ಆಧುನಿಕತೆಗೆ ತೆರೆದುಕೊಳ್ಳುವ ಮೂಲಕ ಇನ್ನಷ್ಟು ಜನಪ್ರಿಯವಾಗುತ್ತ ಬಂದಿದೆ.
ಎಳೆ ಮನಸ್ಸುಗಳನ್ನು ನಮ್ಮ ಈ ಆಚರಣೆಯ ಭಾಗವಾಗಿಸುವ ಸದುದ್ದೇಶದಿಂದ 'ಕಲರ್ ಕೂಟ' ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಮೂರು ವಿಭಾಗಗಳಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಂದ ಎಲ್ಲರೂ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳ ಬಹುದು. ಭಾಗವಹಿಸಿದ ಎಲ್ಲರಿಗೂ ನೆನಪಿನ ಒಂದು ಕಾಣಿಕೆ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಿ ಗೌರವಿಸಲಾ ಗುತ್ತದೆ. ನಮ್ಮ ಕಂಬಳದ ಅನುಭವವನ್ನು ಪುಟ್ಟ ಹಾಗೂ ಯುವ ಪ್ರತಿಭೆಗಳು ತಮ್ಮ ಕುಂಚದಿಂದ ತಮ್ಮ ಹಾಳೆ ಹಾಗು ಮನಸ್ಸುಗಳಲ್ಲಿ ಸೃಷ್ಟಿಸಿ ಈ ಮಣ್ಣಿನ ಸಾಂಸ್ಕೃತಿಕ ಸಂಪತ್ತಿನ ರಾಯಭಾರಿಗಳಾಗಲಿ ಎಂಬ ಆಶಯ ನಮ್ಮದು,ಅದೇ ರೀತಿ ಡ್ರಾಯಿಂಗ್, ರೀಲ್ಸ್ ಹಾಗೂ ಫೋಟೋಗ್ರಫಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಅದೇ ದಿನ ಸಂಜೆ 6.30 ಕ್ಕೆ ನಾಡಿನ ಧಾರ್ಮಿಕ, ಶೈಕ್ಷಣಿಕ, ರಾಜಕೀಯ, ಕ್ರೀಡೆ, ಚಲನಚಿತ್ರ ಕ್ಷೇತ್ರದ ಸಾಧಕರ, ಹಿರಿಯರ, ಗಣ್ಯ ಮಾನ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮರುದಿನ ಬೆಳಿಗ್ಗೆ ಬಹುಮಾನ ವಿತರಣಾ ಸಮಾರಂಭದ ಮೂಲಕ ಕಂಬಳ ಸಂಪನ್ನ ಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಉಪಾಧ್ಯಕ್ಷರಾದ ಅಶೋಕ್ ಕೃಷ್ಣಾಪುರ, ಪ್ರಕಾಶ್ ಗರೋಡಿ, ವಸಂತ್ ಪೂಜಾರಿ, ಕಾರ್ಯದರ್ಶಿ ಸಾಕ್ಷತ್ ಶೆಟ್ಟಿ, ನಂದನ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.