ಡಿ.28: ಬೆಳುವಾಯಿ, ಅಳಿಯ್ಯೂರು: ವಿದ್ಯುತ್ ನಿಲುಗಡೆ
Update: 2024-12-26 15:14 GMT
ಮಂಗಳೂರು: ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬೆಳುವಾಯಿ, ಅಳಿಯೂರು ಮತ್ತು ಶಿರ್ತಾಡಿ ಫೀಡರ್ ಗಳ ವ್ಯಾಪ್ತಿಯಲ್ಲಿ ಡಿ.28ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ.
ಅಂದು ಬೆಳಗ್ಗೆ 9:30ರಿಂದ ಸಂಜೆ 6ರವರೆಗೆ ಈ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳ ಲಾಗಿದೆ. ಹಾಗಾಗಿ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್‌ಕಟ್ಟೆ, ಆಝಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯದೆ, ಕೆಸರಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಅಳಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.