ಎ.28ಕ್ಕೆ ಕಾಂಗ್ರೆಸ್‌ನ ಪ್ರತಿಭಟನೆ ಮುಂದೂಡಿಕೆ
Update: 2025-04-24 22:12 IST

ಮಂಗಳೂರು, ಎ.24: ಕೇಂದ್ರ ಸರಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎ.26ರಂದು ಮಂಗಳೂರಿನಲ್ಲಿ ಆಯೋಜಿಸಿದ ಬೃಹತ್ ಪ್ರತಿಭಟನಾ ಸಭೆಯನ್ನು ಕಾರಣಾಂತರಗಳಿಂದ ಎ.28ಕ್ಕೆ ಮುಂದೂಡಲಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.