ಜ.5: ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಪರಮ ಪವಿತ್ರ ಪ್ರಸಾದ ಮೆರವಣಿಗೆ

Update: 2025-01-03 15:10 GMT

ಮಂಗಳೂರು: ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಪರಮ ಪವಿತ್ರ ಪ್ರಸಾದ ಮೆರವಣಿಗೆಯು ಜ.5ರಂದು ಸಂಜೆ ನಡೆಯಲಿದೆ.

ಅಪರಾಹ್ನ 3.30 ಕ್ಕೆ ಮಿಲಾಗ್ರಿಸ್ ಚರ್ಚ್ ನಲ್ಲಿ ಬಲಿ ಪೂಜೆ ನಡೆದು ಬಳಿಕ ಅಲ್ಲಿಂದ ಪರಮ ಪವಿತ್ರ ಪ್ರಸಾದ ಮೆರವಣಿಗೆ ರೊಜಾರಿಯೊ ಕ್ಯಾಥೆಡ್ರಲ್ ಗೆ ತೆರಳಲಿದೆ. ರೊಜಾರಿಯೊ ಕ್ಯಾಥೆಡ್ರಲ್ ನ ತೆರೆದ ಮೈದಾನದಲ್ಲಿ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಪರಮ ಪವಿತ್ರ ಪ್ರಸಾದದ ಆರಾಧನೆ, ಪ್ರವಚನ ಹಾಗೂ ಆಶೀರ್ವಚನ ನೆರವೇರಲಿದೆ ಎಂದು ಕ್ರೈಸ್ತ ಧರ್ಮ ಪ್ರಾಂತ್ಯದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News