ಎ.5ರಂದು ಸಚಿವ ವೆಂಕಟೇಶ್ ದ.ಕ.ಜಿಲ್ಲೆಗೆ ಭೇಟಿ
Update: 2025-04-04 19:33 IST

ಮಂಗಳೂರು, ಎ.4: ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಎ.5ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಎ.5ರಂದು ಬೆಳಗ್ಗೆ 9ಕ್ಕೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ರೈತ ತರಬೇತಿ ಕೇಂದ್ರ ಹಾಗೂ ಪ್ರಾದೇಶಿಕ ಸಂಶೋಧನಾ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
10:30ಕ್ಕೆ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಾಗೂ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ ಉದ್ಘಾಟಿಸುವರು. ಬಳಿಕ ಉಡುಪಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.