ಜು.8ರಂದು ಉಳ್ಳಾಲ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ

Update: 2024-07-06 06:53 GMT

ಉಳ್ಳಾಲ: ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿ ಮತ್ತು ಸೈಯದ್ ಮದನಿ ಅರಬಿಕ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳಿಗಾಗಿ ನೂತನ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜು.8ರಂದು ಸಂಜೆ 4:30ಕ್ಕೆ ದರ್ಗಾ ವಠಾರದಲ್ಲಿ ಜರುಗಲಿದೆ ಎಂದು ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ.

ಅವರು ಶನಿವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ನೇತೃತ್ವ ವಹಿಸಲಿದ್ದಾರೆ. ಸೈಯದ್ ಕೆ.ಎಸ್.ಆಟಕ್ಕೋಯ ತಂಙಳ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ತಾಜುಲ್ ಉಲಮಾ ಉಳ್ಳಾಲ ತಂಜಳ್ ಪ್ರಾಂಶುಪಾಲರಾಗಿ ಪ್ರಾರಂಭವಾದ ಸೈಯದ್ ಮದನಿ ಅರಬಿಕ್ ಕಾಲೇಜಿನಲ್ಲಿ ಕಲಿತು ಪದವೀಧರಾದ ವಿದ್ಯಾರ್ಥಿಗಳಿಗೆ 'ಮದನಿ' ಎಂಬ ಪದವಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧಾರ್ಮಿಕ ಮತ್ತು ಲೌಕಿಕ ನೀಡುವ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸಂಪೂರ್ಣ ಉಚಿತವಾಗಿ ಹಾಸ್ಟೆಲ್ ಕಾರ್ಯನಿರ್ವಹಿಸಲಿದೆ. ಸುಮಾರು 5.5 ಕೋಟಿ ರೂ. ವೆಚ್ಚದಲ್ಲಿ ಈ ಕಟ್ಟಡದ ಕಾಮಗಾರಿ ನಡೆಸಲಾಗುವುದು. 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಕಂಪ್ಯೂಟರ್ ಲಾಬ್, ಲೈಬ್ರೆರಿ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದರ್ಗಾ ಸಮಿತಿಯ ಪ್ರಧಾನ ಕಾರ್ಯದರ್ಶಿಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಜೊತೆ ಕಾರ್ಯದರ್ಶಿ ಮುಸ್ತಫ ಮದನಿ ನಗರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News