ಎ.9ಕ್ಕೆ ದ.ಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ: ವೇದವ್ಯಾಸ ಕಾಮತ್

Update: 2025-04-07 22:04 IST
ಎ.9ಕ್ಕೆ ದ.ಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ: ವೇದವ್ಯಾಸ ಕಾಮತ್
  • whatsapp icon

ಮಂಗಳೂರು: ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ಮೂಲಕ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ. ಇದರ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭ ಗೊಂಡಿದ್ದು, ಎ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು.

ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಅಂದು ಮಧ್ಯಾಹ್ನ 3 ಕ್ಕೆ ನಗರದ ಅಂಬೇಡ್ಕರ್ ಸರ್ಕಲ್ ನಿಂದ ಕ್ಲಾಕ್ ಟವರ್‌ವರೆಗೆ ಜನಾಕ್ರೋಶ ಯಾತ್ರೆ ನಡೆಯಲಿದೆ.

ಪಾದಯಾತ್ರೆಯಲ್ಲಿ ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ್, ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ, ಸಹಿತ ಅನೇಕ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದು ಈಗಾಗಲೇ ಈ ಹೋರಾಟದ ಯಶಸ್ಸಿಗೆ ಅಗತ್ಯವಿರುವ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ ಎಂದರು.

ಗೋಷ್ಟಿಯಲ್ಲಿ ಪಕ್ಷದ ಪ್ರಮುಖರಾದ ಪೂರ್ಣಿಮಾ, ರಮೇಶ್ ಹೆಗ್ಡೆ, ಕಿರಣ್ ರೈ, ಜಯಲಕ್ಷ್ಮಿ ಶೆಟ್ಟಿ, ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News