ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿ ಗೆದ್ದ ಮಂಗಳೂರಿನ ಬಾಲಕ

Update: 2024-08-14 08:55 GMT

ಮಂಗಳೂರು, ಆ. 14: ನಗರದ 13ರ ಹರೆಯದ ಬಾಲಕ ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆ ಫ್ಯಾಷನ್, ಮಾಡೆಲಿಂಗ್ ಹಾಗೂ ಪ್ರತಿಭಾ ಪ್ರದರ್ಶನವನ್ನು ಒಳಗೊಂಡಿರುತ್ತದೆ ಎಂದು ವಿಜೆ ಡಿಕ್ಸನ್ ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದ ಸ್ಪರ್ಧೆಯಲ್ಲಿ, ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ, ನೇಪಾಳ ಸೇರಿದಂತೆ ಹಲವಾರು ದೇಶಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು.

ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದ ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಜಯಗಳಿಸಿದ್ದಾರೆ ಎಂದರು.

ಬಜ್ಪೆ ಸೈಂಟ್ ಜೋಸೆಫ್ ಹೈಸ್ಕೂಲ್ ನ 8ನೇ ತರಗತಿಯ ವಿದ್ಯಾರ್ಥಿಯಾಗಿರುವ ವರುಣ್ ಹಲವಾರು ನೃತ್ಯ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ ಮತ್ತು ಜಾಹೀರಾತು ಶೂಟ್ ಗಳಲ್ಲಿ ಭಾಗವಹಿಸುತ್ತಿದ್ದಾರೆ. ಈತ ಲಿಡಿವಿನ್ ಡಿಕೋಸ್ಟಾ ಮತ್ತು ವಿನ್ಸೆಂಟ್ ಡಿಕೋಸ್ಟಾ ಅವರ ಪುತ್ರ.

ವರುಣ್ ಅವರಿಗೆ ಮಂಗಳೂರಿನ ಸಾಕಷ್ಟು ನೃತ್ಯ, ಪ್ಯಾಶನ್ ಕ್ಷೇತ್ರದ ಪ್ರಮುಖರು ತರಬೇತಿ ನೀಡಿದ್ದು, ಡಿಸೈನರ್ ಉಡುಪುಗಳನ್ನು ಹೇರಾ ಪಿಂಟೋ ಕೂಟ್ಯೂರ್ ವಿನ್ಯಾಸಗೊಳಿಸಿದರು.ಕಳೆದ ವರ್ಷ ಮಿಸ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿ ಮಂಗಳೂರಿನ ಯಶಸ್ವಿನಿ ದೇವಾಡಿಗ ಅವರು ಗೆದ್ದಿದ್ದರು ಎಂದು ಅವರು ತಿಳಿಸಿದರು.

ಮುಂದೆ ಮಿಸ್ಟರ್ ಇಂಡಿಯಾ ಆಗಬೇಕೆಂಬ ಆಸೆಯಿದ್ದು, ಇಂಡಿಯನ್ ಬೆಸ್ಟ್ ಡ್ಯಾನ್ಸರ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಶೋಗಳಲ್ಲಿ ಭಾಗವಹಿಸುವ ಇಚ್ಚೆ ಇದೆ ಎಂದು ವರುಣ್ ಡಿಕೋಸ್ಟಾ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ವರುಣ್ ತಾಯಿ ಲಿಡ್ವಿನ್ ಡಿಕೋಸ್ಟಾ, ವಿನಾಲ್ ಡಿಕೋಸ್ಟಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News