ಮೂಡುಬಿದಿರೆ | ಕಲ್ಲಮುಂಡ್ಕೂರಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Update: 2024-10-01 10:31 GMT

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ವ್ಯಾಪ್ತಿಯಲ್ಲಿ ತಿರುಗಾಡುತ್ತಾ ಜನರಲ್ಲಿ ಭಯಹುಟ್ಟು ಹಾಕಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಬೋನಿಟ್ಟು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಲವು ದಿನಗಳಿಂದ ಕಲ್ಲಮುಂಡ್ಕೂರು ಪರಿಸರದಲ್ಲಿ ಚಿರತೆಯೊಂದು ಓಡಾಡುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಈ ಕುರಿತು ಗ್ರಾಮಸ್ಥರು ಗ್ರಾಮ ಪಂಚಾಯತ್ ಸದಸ್ಯ ವಸಂತ್ ಅವರ ಗಮನಕ್ಕೆ ತಂದಿದ್ದರು.

ಗ್ರಾಮಸ್ಥರಿಂದ ದೂರು ಬಂದ ಹಿನ್ನೆಲೆಯಲ್ಲಿ ವಸಂತ್ ಅವರು ಮೂಡುಬಿದಿರೆ ಅರಣ್ಯಾಧಿಕಾರಿ ಎಸಿಎಪ್ ಪಿ.ಶ್ರೀಧರ್ ಅವರಿಗೆ ಮಾಹಿತಿ ರವಾನಿಸಿದ್ದರು. ಅವರ ಸೂಚನೆಯಂತೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಆರಂಭಿಸಿದ ಮೂಡುಬಿದಿರೆ ಉಪ ವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ, ಗಸ್ತು ಅರಣ್ಯ ಪಾಲಕ ರಾಜೇಶ್ ಅರ ತಂಡ ಕಳಸಬೈಲು ಎಂಬಲ್ಲಿ ಮೂರು ದಿನಗಳ ಹಿಂದೆ ಬೋನೊಂದನ್ನು ಇಟ್ಟಿತ್ತು. ಇಂದು ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News