ಸಾರ್ವಜನಿಕರಿಂದ ಸಚಿವ ದಿನೇಶ್ ಗುಂಡೂರಾವ್ ಅಹವಾಲು ಸ್ವೀಕಾರ
Update: 2023-09-20 16:23 GMT
ಮಂಗಳೂರು, ಸೆ.20: ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ. 20ರ ಬುಧವಾರ ಸಂಜೆ ಸಾರ್ವಜನಿಕದಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಸೇರಿದಂತೆ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಜಿಲ್ಲಾ ಉಸ್ತುವಾರಿ ಸಚಿವರಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.