ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ

Update: 2023-10-05 16:27 GMT

ಮಂಗಳೂರು. ಅ.8 : ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 2023 ನವೆಂಬರ್ 4 -5 ರಂದು ನಡೆಯಲಿರುವ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಲಾಂಛನ ಅನಾವರಣಗೊಂಡಿದೆ.

ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ಸಂಸ್ಥೆಯ ಸಂಚಾಲಕ ಖ್ಯಾತ ಕಲಾವಿದ ಪಿಂಟೊ ವಾಮಂಜೂರ್ ತಯಾರಿಸಿರುವ ಸಮ್ಮೇಳನದ ಲಾಂಛನವನ್ನು ರಾಕ್ಣೊ ಪತ್ರಿಕೆಯ ವಿಶ್ರಾಂತ ಸಂಪಾದಕ ಫಾ. ಮಾರ್ಕ್ ವಾಲ್ಡರ್ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದರು.

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಗೋಕುಲದಾಸ ಪ್ರಭು ನೋಂದಣಿ ಪುಸ್ತಕ ಬಿಡುಗಡೆ ಮಾಡಿದರು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ನೊ) ಅಧ್ಯಕ್ಷ ಆಲ್ವಿನ್ ಡಿ’ ಸೋಜ ಪಾನೀರ್ ಕ್ಯೂಆರ್ ಕೋಡ್ ಮೂಲಕ ಆನ್‌ಲೈನ್ ನೋಂದಣಿಗೆ ವಿದ್ಯುಕ್ತ ಚಾಲನೆ ನೀಡಿದರು. ಅಖಿಲ ಭಾರತ ಕೊಂಕಣಿ ಪರಿಷತ್ ಅಧ್ಯಕ್ಷ ಅರುಣ್ ಉಭಯ್‌ಕರ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಎಚ್. ಎಂ. ಪೆರ್ನಾಲ್ ಸ್ವಾಗತಿಸಿದರು. ಸಾಹಿತ್ಯ ಅಕಾಡೆಮಿ ಹೊಸದಿಲ್ಲಿ ಇದರ ಕಾರ್ಯಕಾರಿ ಸಮಿತಿ ಸದಸ್ಯ ಮೆಲ್ವಿನ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಬಂಟ್ವಾಳ್‌ಕರ್ ವಂದಿಸಿದರು.

800 ಪ್ರತಿನಿಧಿಗಳ ನಿರೀಕ್ಷೆ: ದೇಶದ ವಿವಿಧ ಭಾಗಗಳಿಂದ ಸುಮಾರು 800 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಟೈಟಸ್ ನೊರೊನ್ಹಾ ತಿಳಿಸಿದ್ದಾರೆ.

ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಆನ್‌ಲೈನ್ ಮೂಲಕ ನೋಂದಣಿ ಆರಂಭಿಸಲಾಗಿದೆ. ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿದ್ದು, 1939ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದರು. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News