ಶರಣ್ ಪಂಪ್‌ವೆಲ್‌ಗೆ ಬೆದರಿಕೆ ಆರೋಪ: ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು

Update: 2024-09-15 16:39 GMT

ಬಂಟ್ವಾಳ, ಸೆ.15: ಬಜರಂಗದಳದ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಮೊಬೈಲ್ ಸಂದೇಶದಲ್ಲಿ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ವಿರುದ್ಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗೆ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಸಂದರ್ಭ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶರಣ್ ಪಂಪ್‌ವೆಲ್ ಮೀಲಾದುನ್ನೆಬಿ ಮೆರವಣಿಗೆ ಕುರಿತು ನೀಡಿದ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಪ್ರತಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ಮೊಬೈಲ್ ಮೂಲಕ ಶರಣ್ ಪಂಪ್‌ವೆಲ್‌ನ ಹೆಸರು ಉಲ್ಲೇಖಿಸಿ ನೀಡಿದ್ದಾನೆ ಎನ್ನಲಾದ ಧ್ವನಿ ಸಂದೇಶವು ಸಾಕಷ್ಟು ವೈರಲ್ ಆಗಿತ್ತು.

ಹಾಗಾಗಿ ಮುಹಮ್ಮದ್ ಶರೀಫ್ ವಿರುದ್ಧ ಬಂಟ್ವಾಳ ಪ್ರಖಂಡ ವಿಶ್ವಹಿಂದೂ ಪರಿಷತ್, ಬಜರಂಗ ದಳವು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿತ್ತು. ಅದರಂತೆ ಇದೀಗ ಪ್ರಕರಣ ದಾಖಲಾಗಿದೆ.

*ಸಾಮಾಜಿಕ ಜಾಲತಾಣದ ಮೂಲಕ ಧ್ವನಿ ಸಂದೇಶ ಹರಿಯಬಿಟ್ಟ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News