ಅಖಿಲ ಭಾರತ ಕ್ರೈಸ್ತರ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಆಲ್ವಿನ್ ಡಿಸೋಜ ಆಯ್ಕೆ

Update: 2024-08-25 15:25 GMT

ಮಂಗಳೂರು: ಊಟಿಯಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಚುನಾವಣೆಯಲ್ಲಿ ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ರವರು ಬಹುಮತದಿಂದ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕೋಳಿ ಸಾಕಣಿಕೆ ಸಂಘದ ನಿರ್ದೇಶಕರಾಗಿ, ಲೇಡಿಆಫ್ ಮರ್ಸಿ ಚರ್ಚಿನ ಅಡಳಿತ ಮಂಡಳಿಯ ಉಪಾಧ್ಯಕ್ಷರಾಗಿ, ಕೋಟೆಕಾರ್ ಪಂಚಾಯತ್ ನ ಸದಸ್ಯರಾಗಿ, ಕೋಟೆಕಾರ್ ಗ್ರಾಮದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಕೆಡಿಪಿ ಸದಸ್ಯರಾಗಿ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಘಟಕ, ವಲಯ ಮತ್ತು ಕೇಂದ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News