ಅಂಬೇಡ್ಕರ್ ಆದರ್ಶಗಳು ನಮಗೆಲ್ಲರಿಗೂ ದಾರಿ ದೀಪ : ಯು.ಟಿ.ಖಾದರ್

ಕೊಣಾಜೆ : ಸಂವಿಧಾನ ಶಿಲ್ಫಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ, ಉಳ್ಳಾಲ ಇದರ ವತಿಯಿಂದ ಪಂಚಮ ವರ್ಷದ ಆಚರಣೆ, ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ವಿವಿಧ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ಅಂಬೇಡ್ಕರ್ ಅವರ ಕುರಿತ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅಭಿನಂದನಾ ಸಮಾರಂಭವು ಇತ್ತೀಚೆಗೆ ನಡೆಯಿತು.
ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸನ್ಮಾನ ನೆರವೇರಿಸಿ ಮಾತನಾಡಿದ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು, ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಿ ಮುನ್ನಡೆಯಬೇಕು ಎಂದರು.
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್ ಈಶ್ವರ್ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಓದಬೇಕು. ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುರಯ್ಯಾ ಅಂಜುಮನ್ ಅವರು ನೆರವೇರಿಸಿದರು. ಕೊಡಗಿನ ಸರ್ಕಾರಿ ಬಾಲಕರ ಬಾಲ ಮಂದಿರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀಕ್ಷಕರಾದ ಶ್ರೀಧರ ಕೆ.ಎಸ್. ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರಂಭದಲ್ಲಿ ಕೊಣಾಜೆ ಗ್ರಾ.ಪಂ.ಅಧ್ಯಕ್ಷರಾದ ಗೀತಾ ಕುಂದರ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಶೌಕತ್ ಆಲಿ, ಎಂ.ಡಿ.ಮಂಚಿ, ರಾಜೀವ ಪಿ, ವಿನುತ ಗಟ್ಟಿ, ಕೈರುನ್ನಿಸಾ, ಮುಖಂಡರಾದ ಸುನೀಲ್ ಬಜಾಲ್, ದಯಾನಂದ ಮಾಸ್ಟರ್, ಶಿಕ್ಷಕರಾದ ಗೀತಾ ಜೂಡಿತ್ ಸಲ್ದಾನ, ಸಿಲ್ವಿಯಾ ಬಿ., ರಾಜೇಶ್ವರಿ, ರಹಿಮಾನ್ ಕೊಣಾಜೆ ಮೊದಲಾದವರು ಉಪಸ್ಥಿತರಿದ್ದರು.
ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಉಳ್ಳಾಲ ಇದರ ಅಧ್ಯಕ್ಷರಾದ ಯಾದವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸಾದ್ ಬೋಲ್ಮರ್ ಸಾಲೆತ್ತೂರು ನಿರೂಪಿಸಿದರು.