ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

Update: 2023-09-25 15:48 GMT

ಮಂಗಳೂರು: ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ೩೩ನೇ ಸಾಲಿನ ವಾರ್ಷಿಕ ಮಹಾಸಭೆಯು ಶನಿವಾರ ನಗರದ ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಹಾಜಿ ಬಿ. ಇಬ್ರಾಹೀಂ ಅಧ್ಯಕ್ಷತೆ ವಹಿಸಿದ್ದರು. ಬಜ್ಪೆಮಸೀದಿಯ ಖತೀಬ್ ಅಬ್ದುಲ್ ರಹ್ಮಾನ್ ಸಖಾಫಿ ದುಆಗೈದು ಸಭೆಗೆ ಚಾಲನೆ ನೀಡಿದರು. ಈ ಸಂದರ್ಭ ಸಂಘದ ಸದಸ್ಯರಿಗೆ ಶೇ.೫ ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ನಿರ್ದೇಶಕರಾದ ಅಬ್ದುಲ್ ಸಲಾಂ, ಅಬ್ದುಲ್ ರಝಾಕ್ ಎಂ., ನಿಸಾರ್ ಫಕೀರ್ ಮುಹಮ್ಮದ್, ರತ್ನಾಕರ್ ರಾವ್, ನೂರ್ ಅಮೀನ, ಶಾಹಿದಾ, ಕೆ. ಸುದರ್ಶನ್ ಶೆಟ್ಟಿ ಹಾಗೂ ಸಿಬ್ಬಂದಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಎಂ.ಅಬ್ದುಲ್ ಅಝೀಝ್ ಕುದ್ರೋಳಿ ಸ್ವಾಗತಿಸಿದರು. ಕಾರ್ಯದರ್ಶಿ ಶೆರೀನ್ ಬಾನು ವರದಿ ವಾಚಿಸಿದರು. ಸಂಘದ ನಿರ್ದೇಶಕ ಮುನೀರ್ ಅಹ್ಮದ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News