ಅರಿವು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸು ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ ಆಯುಷ್), ಇಂಜಿನಿಯರಿಂಗ್ ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ.ಆರ್ಕ್, ಎಂ.ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೈರಿ ಟೆಕ್ನೋಲಾಜಿ, ಫಾರೆಸ್ಟ್ರೀ, ವೆಟರ‌್ನರಿ ಅಂಡ್ ಅನಿಮಲ್ ಟೆಕ್ನೋಲಾಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್, ಫುಡ್ ನ್ಯುಟ್ರಿಶನ್ ಅಂಡ್ ಡಯಟಿಟಿಕ್ಸ್, ಬಿ-ಫಾರ್ಮಾ, ಎಂ ಫಾರ್ಮಾ, ಫಾರ್ಮಾ ಡಿ, ಅಂಡ್ ಡಿ ಫಾರ್ಮಾಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ ಗಳಿಗೆ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ನಿಗಮದ - https://kmdconline.karnataka.gov.in- ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574990, ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ :08254-230370, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.