ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಮಂಗಳೂರು, ನ.13: ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 2024ರ ಫೆಬ್ರವರಿ 3ರಂದು ಗಂಜಿಮಠದಲ್ಲಿರುವ ’ಝಾರಾ ಕನ್ವೆಂಶನ್ ಸೆಂಟರ್’ನಲ್ಲಿ ತನ್ನ ಎಂಟನೇ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ.
ದ.ಕ., ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, ನಾಲ್ಕು ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಬ್ಯಾರೀಸ್ ವೆಲ್ಫೇರ್ ಫೋರಂ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನಾಂಕವಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಉಮರ್ ಯು. ಎಚ್. ಸಂಚಾಲಕರು, ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹ ಸಂಘಟನಾ ಸಮಿತಿ, ಎಲ್‌ಎಕ್ಸ್‌ಎಂ ಸೀ ಫುಡ್ ಎಕ್ಸ್‌ಪೋಟ್ಸ್, ನಂ.14, ಒಂದನೇ ಮಹಡಿ, ಅಡೋನೈ ಟವರ್ಸ್, ಕಂಕನಾಡಿ ರಸ್ತೆ, ಹೈಲ್ಯಾಂಡ್ ಆಸ್ಪತ್ರೆ ಬಳಿ, ಮಂಗಳೂರು 575002, (ಮೊ.ಸಂ: 9845054191)ನ್ನು ಸಂಪರ್ಕಿಸಬಹುದು ಎಂದು ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.