ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2024-08-31 13:29 GMT

ಮಂಗಳೂರು: ಪ್ರಸಕ್ತ (2024-25ನೇ) ಸಾಲಿಗೆ 1ರಿಂದ 8ನೇ ತರಗತಿಯ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ https://ssp.postmatric.karnataka.gov.in ಮೂಲಕ ನಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ೧ ಲಕ್ಷ ಒಳಗಿರಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dom.karnataka.gov.in/dakshina_kannada/public  ಅಥವಾ https://ssp.karnataka.gov.in ಪೋರ್ಟಲ್ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News