ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

Update: 2024-09-11 13:14 GMT

ಮಂಗಳೂರು, ಸೆ.11: ದ.ಕ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಂಗಳೂರು ಮಹಿಳಾ ವಿಭಾಗದ ವತಿಯಿಂದ ಮಹಿಳೆ ಯರಿಗೆ ಸೆ.17ರಿಂದ 3 ತಿಂಗಳ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಯು ಎಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕ ರಜೆಗಳ ಹೊರತಾಗಿ ಪ್ರತಿದಿನ ತರಬೇತಿ ನಡೆಯಲಿದೆ. ತರಬೇತಿಗೆ ಬೇಕಾದ ಸಾಮಗ್ರಿಗಳನ್ನು ಅಭ್ಯರ್ಥಿಗಳೇ ತರಬೇಕಾಗುತ್ತದೆ. ಮಾಹಿತಿಗೆ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಕಚೇರಿಯನ್ನು (ಮೊ.ಸಂ:9483791031) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News