6ರಿಂದ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್‌ಗೆ ಅರ್ಜಿ ಆಹ್ವಾನ

Update: 2023-09-08 13:56 GMT

ಮಂಗಳೂರು : ಭಾರತೀಯ ಅಂಚೆ ಇಲಾಖೆಯು 6ರಿಂದ 9ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ‘ಫಿಲಾಟೆಲಿ’ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಲ್ ಸ್ಪರ್ಶ್‌ಯೋಜನೆಯ ಸ್ಕಾಲರ್ ಶಿಪ್‌ಗೆ ಅರ್ಜಿ ಆಹ್ಪಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ-೫೭೫೦೦೨ ಈ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯೊತ ಅಂಚೆ ಮೂಲಕ ಸೆ.೧೫ರೊಳಗೆ ಸಲ್ಲಿಸಬೇಕು. ೨೦೨೨-೨೩ರ ವಾರ್ಷಿಕ ಪರೀಕ್ಷೆಯಲ್ಲಿ ಶೇ.೬೦ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದುಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ www.karnatakapost.gov.in ಗೆ ಅಥವಾ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡುವಂತೆ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News