ಅಸೈಗೋಳೀ: ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ

Update: 2024-08-09 09:14 GMT

ದೇರಳಕಟ್ಟೆ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಮುಸ್ಲಿಂ ವಸತಿ ಶಾಲೆ, ಆಸೈ-ಮದಕದಲ್ಲಿ ಕಳೆದ 28 ವರ್ಷಗಳಿಂದ ಅಲ್ಪಸಂಖ್ಯಾತ ಮುಸ್ಲಿಂ ಮಕ್ಕಳಿಗೆ ರಾಜ್ಯ ಪಠ್ಯಪುಸ್ತಕ ಕ್ರಮದಲ್ಲಿ ವಿದ್ಯಾಭ್ಯಾಸ ನೀಡುತ್ತಿದ್ದು, ಇಲ್ಲಿನ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಹಳೆ ವಿದ್ಯಾರ್ಥಿಗಳ ಸಂಘ ಕಾರ್ಯಪ್ರವೃತ್ತರಾಗಿದ್ದಾರೆ .

ಈ ಬಾರಿ ಆಗಸ್ಟ್ 15 ಸ್ವಾತಂತ್ರೋತ್ಸವದ ಧ್ವಜಾರೋಹಣದ ಬಳಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಹಳೆ ವಿದ್ಯಾರ್ಥಿಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1996ರಿಂದ ಈ ವರೆಗೆ ವಿದ್ಯಾಭ್ಯಾಸಗೈದ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಆಡಳಿತ ಮಂಡಳಿಯು ಈ ಮೂಲಕ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News