ನ :14: ಎಸ್‌ವೈಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಯುವಜನೋತ್ಸವ

Update: 2023-11-13 16:16 GMT

ಮಂಗಳೂರು: ಎಸ್‌ವೈಎಸ್ ಕರ್ನಾಟಕ ಇದರ ಮೂವತ್ತನೇ ವಾರ್ಷಿಕ ಮಹಾ ಸಮ್ಮೇಳನವು 2024 ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಅದರ ಪ್ರಚಾರಾರ್ಥ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಯುವಜನೋತ್ಸವ ಕಾರ್ಯಕ್ರಮವು ನ.14ರ ಮಧ್ಯಾಹ್ನ 2 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಜಿಲ್ಲಾಧ್ಯಕ್ಷ ಇಸ್‌ಹಾಕ್ ಝುಹ್ರಿ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2-30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರ ತನಕ ಎಸ್‌ವೈಎಸ್ ಕಾರ್ಯಕರ್ತರಿಗೆ ವಿಶೇಷ ತರಗತಿ ನಡೆಯಲಿರುವುದು.

ಸಂಜೆ 6 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್, ಎಸ್ಸೆಸ್ಸೆಫ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯಿದ್ ಜಲಾಲುದ್ದೀನ್ ಸ‌ಅದಿ ತಂಙಳ್ ಮಳ್‌ಹರ್, ಹಂಝ ಮಿಸ್ಬಾಹಿ ಓಟ್ಟಪಡವು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಹಫೀಳ್ ಸ‌ಅದಿ ಕೊಳಕೇರಿ, ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್ ಹಾಗೂ ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News