ಆ.11: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-08-10 15:41 GMT

ಮಂಗಳೂರು, ಆ.10: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆ.11ರಂದು ದ.ಕ.ಜಿಲ್ಲೆಯ ಪ್ರವಾಸದಲ್ಲಿರುವರು.

ಆ.11ರ ಪೂ.11ಕ್ಕೆ ಮಂಗಳೂರು ಅಂತರಾಷ್ಟ್ರೀತ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12:30ಕ್ಕೆ ಪುತ್ತೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವರು. ಮಧ್ಯಾಹ್ನ 2ಕ್ಕೆ ಪುತ್ತೂರು ನಿರೀಕ್ಷಣಾ ಮಂದಿರಲ್ಲಿ ವಾಸ್ತವ್ಯ ಹೂಡುವರು.

ಅಪರಾಹ್ನ 3ಕ್ಕೆ ಪುತ್ತೂರು ಸಾರ್ವಜನಿಕ ಆಸ್ಪತ್ರೆ ತಪಾಸಣೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 6ಕ್ಕೆ ದರ್ಭೆಯಲ್ಲಿರುವ ಪುತ್ತೂರು ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ಬಳಿಕ ಕಾರ್ಯಕರ್ತ ರೊಂದಿಗೆ ವಿಚಾರ ವಿನಿಮಯ ಮಾಡುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News