ಆ.1: ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ.-ಉಡುಪಿ ಜಿಲ್ಲಾ ಪ್ರವಾಸ

Update: 2023-07-31 14:02 GMT

ಮಂಗಳೂರು, ಜು.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿಯ ಪ್ರವಾಸ ಕೈಗೊಳ್ಳಲಿರುವ ಅವರು ಆ.1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬಳಿಕ ಅಲ್ಲಿಂದ ಉಡುಪಿಗೆ ತೆರಳುವರು. 12:30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸುವರು. ಸಂಜೆ 4:15ಕ್ಕೆ ದ.ಕ.ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸುವರು. ರಾತ್ರಿ 9:50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News