ಆ.11: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Update: 2023-08-09 18:21 GMT

ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 11ರಂದು ದ.ಕ.ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ.

ಅಂದು ಮಧ್ಯಾಹ್ನ 12.30ಕ್ಕೆ ಪುತ್ತೂರಿನ ಪುರಭವನದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ಕಾರ್ಯಕ್ರಮ, 3 ಗಂಟೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆ ತಪಾಸಣೆ, ಅಧಿಕಾರಿಗಳೊಂದಿಗೆ ಚರ್ಚೆ, 6 ಗಂಟೆಯಿಂದ 7.30ರವರೆಗೆ ಸಾರ್ವಜನಿಕ ಮತ್ತು ಕಾರ್ಯಕರ್ತರ ಅಹವಾಲು ಸ್ವೀಕಾರ, ವಿಚಾರ ವಿನಿಮಯ ಕಾರ್ಯ ನಡೆಯಲಿದೆ.  ರಾತ್ರಿ 10:45ಕ್ಕೆ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News