ಆ.14 : ಪುತ್ತೂರು ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಎಟಿಎಂ ಉದ್ಘಾಟನೆ
ಪುತ್ತೂರು : ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪುತ್ತೂರು ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನವೀಕೃತ ಡಾಟಾ ಸೆಂಟರ್ ಉದ್ಘಾಟನೆ ಆ.14ರಂದು ಬೆಳಿಗ್ಗೆ 11 ಗಂಟೆಗೆ ಬ್ಯಾಂಕಿನ ಪುತ್ತೂರು ಶಾಖೆಯ ಸಭಾಭವನ ದಲ್ಲಿ ನಡೆಯುವುದು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಟಿಎಂ ವ್ಯವಸ್ಥೆಯನ್ನು ಶಾಸಕ ಅಶೋಕ್‍ಕುಮಾರ್ ರೈ ಅವರು ಉದ್ಘಾಟಿಸುವರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು. ಪುತ್ತೂರು ನಗರ ಸಭೆಯ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ಅವರು ನವೀಕೃತ ಡಾಟಾ ಸೆಂಟರ್ ಉದ್ಘಾಟಿಸುವರು. ಪುತ್ತೂರಿನ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್‍ಕೌಶಲ್ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸುವರು ಎಂದರು.
ರಾಜೇಂದ್ರ ಕುಮಾರ್ ಗೆ ಸನ್ಮಾನ
ಸಹಕಾರಿ ಕ್ಷೇತ್ರದಲ್ಲಿ ಅತ್ಯುನ್ನತ ಸೇವೆ ಸಲ್ಲಿಸುವ ಹಾಗೂ ಸಾಧನೆಗೈಯುವ ಮೂಲಕ ಗ್ಲೋಬಲ್ ಎಕ್ಸಲೆನ್ಸ್, ಮದರ್‍ತೆರಸಾ ಮತ್ತು ಸಹಕಾರಿ ಭೂಷಣ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರಕುಮಾರ್ ಅವರನ್ನು ಪುತ್ತೂರು ಭಾಗದ ಸಹಕಾರಿಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾ ಗುವುದು ಎಂದು ಅವರು ತಿಳಿಸಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 8 ಕಡೆಗಳಲ್ಲಿ ಎಟಿಎಂ ವ್ಯವಸ್ಥೆ ಕಲ್ಪಿಸಿ ಸೇವೆ ನೀಡುತ್ತಾ ಬಂದಿದ್ದು, ಇದೀಗ ಪುತ್ತೂರಿನಲ್ಲಿ 9ನೇ ಎಟಿಎಂ ವ್ಯವಸ್ಥೆ ಯಾಗಿದೆ. ಪುತ್ತೂರು ಭಾಗದ ಜನತೆಗೆ ಇದರಿಂದಾಗಿ ಇನ್ನಷ್ಟು ಹೆಚ್ಚಿನ ಅನುಕೂಲ ಆಗಲಿದೆ ಎಂದರು ಅವರು ತಿಳಿಸಿದರು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್‍ಕುಮಾರ್ ರೈ, ಶಾಖಾ ವ್ಯವಸ್ಥಾಪಕಿ ಜಲಜಾ, ಮೇಲ್ವಿಚಾರಕರಾದ ವಸಂತ್ ಮತ್ತು ಶರತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.