ಆ.23: ಚಂದ್ರಯಾನ-3ರ ನೇರಪ್ರಸಾರ

Update: 2023-08-22 17:13 GMT

ಮಂಗಳೂರು : ನಗರ ಹೊರವಲಯದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆ.23ರ ಸಂಜೆ 5:20ರಿಂದ 6:30ರವರೆಗೆ ಚಂದ್ರಯಾನ-3ರ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.

ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬ್ಬಂದಿ ವರ್ಗವು ಈ ಬಗ್ಗೆ ಸೂಕ್ತ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ವಿವರಿಸುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News