ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಜಾಗೃತಿ ಅಗತ್ಯ: ಯು.ಕೆ. ಮೋನು

Update: 2023-11-12 13:35 GMT

ಮಂಗಳೂರು  : ‘‘ಮಧುಮೇಹ ಕಾಯಿಲೆಯು ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು ದೇಶದಲ್ಲಿ ಲಕ್ಷಾಂತರ ಜನರನ್ನು ಬಾಧಿಸಿದೆ. ದೇಹದ ಆರೋಗ್ಯ ಮತ್ತು ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಕಾಯಿಲೆಯ ನಿಯಂತ್ರಣದ ನಿಟ್ಟಿನಲ್ಲಿ ಜಾಗೃತಿ ಅಗತ್ಯ ಎಂದು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ.ಹಾಜಿ ಯು.ಕೆ.ಮೋನು ಅಭಿಪ್ರಾಯಪಟ್ಟರು.

ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಶಾಸ್ತ್ರ ವಿಭಾಗದ ಶನಿವಾರ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘‘ವಿಶ್ವ ಮಧುಮೇಹ ದಿನಾಚರಣೆ’’ ಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿನಿಧಿಗಳು ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ಅಯೋಜಿಸಿದ ಈ ವೈದ್ಯಕೀಯ ಕಾರ್ಯಗಾರದ ಸದುಪಯೋಗವನ್ನು ಪಡೆದು ಜ್ಞಾನವನ್ನು ವೃದ್ಧಿಸಬೇಕೆಂದು ಸಲಹೆ ನೀಡಿದರು.

ಸಂಸ್ಥೆಯ ಸಲಹೆಗಾರ ಪ್ರೊ. ಮೊಹಮ್ಮದ್ ಇಸ್ಮಾಯಿಲ್ ಮಾತನಾಡಿದ ಮಧುಮೇಹ ಕಾಯಿಲೆಯ ಬಗ್ಗೆ ಮಾಹಿತಿ ಜಾಗೃತಿ ಮುಂಜಾಗೃತೆ ಕ್ರಮಗಳ ಬಗ್ಗೆ ವಿವರ ನೀಡಿದರು.

ಸಂಘಟನಾ ಸಮಿತಿಯ ಅಧ್ಯಕ್ಷ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದೇವದಾಸ್‌ರೈ ಮಧುಮೇಹ ಕಾಯಿಲೆಯು ಒಂದು ಆಧುನಿಕ ಜೀವನ ಶೈಲಿ ಪದ್ಧತಿಯ ಕಾಯಿಲೆಯಾಗಿದ್ದು, ಕೆಲಸದ ಒತ್ತಡ, ಬೊಜ್ಜು, ಅಧಿಕ ಸಕ್ಕರೆ ಅಂಶದ ಆಹಾರ ಸೇವನೆ ಮತ್ತು ವ್ಯಾಯಾಮ ರಹಿತಜೀವನ ಎಂದು ನುಡಿದು ಅದರ ವಿವಿಧಕಾರಣ, ಲಕ್ಷಣ ಮತ್ತು ಚಿಕಿತ್ಸಾ ಕ್ರಮಗಳ ಬಗ್ಗೆ ವಿವರ ನೀಡಿದರು.

ಈ ಕಾರ್ಯಗಾರದಲ್ಲಿ ಡಾ ಸುಪ್ರಿತಾ ಶೆಟ್ಟಿ ‘‘ಕಿರಿಯರಲ್ಲಿ ಡಯಾಬಿಟೀಸ್ ಕಾಯಿಲೆ’’ ಮತ್ತು ಡಾ. ಪ್ರಭಾ ಅಧಿಕಾರಿ, ‘‘ಹಿರಿಯರಲ್ಲಿ ಡಯಾಬಿಟೀಸ್ ಕಾಯಿಲೆ’’ ಬಗ್ಗೆ ಉಪನ್ಯಾಸ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಗಣೇಶ್ ಮತ್ತು ಡಾ. ಬಾಲಕೃಷ್ಣ ವೆಲಿಯತ್‌ಡಯಾಬಿಟೀಸ್‌ಕಾಯಿಲೆಯ ಉಪಶಮನ ಮತ್ತು ನಿರ್ವಹಣೆ ಬಗ್ಗೆ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಪ್ರಾಂಶುಪಾಲರಾದ ಡಾ. ರತ್ನಾಕರ್ ಸಲಹಾ ಸಮಿತಿಯ ಸದಸ್ಯ ಡಾ. ಎಂ.ವಿ. ಪ್ರಭು ಉಪಸ್ಥಿತರಿದ್ದರು.

ವೈದ್ಯಕೀಯ ಕಾರ್ಯಗಾರದಲ್ಲಿ ಸುಮಾರು 150 ವೈದ್ಯರು, ವೈದ್ಯಕೀಯ ಶಿಕ್ಷಣ, ಸ್ನಾತಕೋತರ ವಿದ್ಯಾರ್ಥಿಗಳು ಭಾಗವ ಹಿಸಿದ್ದರು.ಸಂಘಟನಾ ಕಾರ್ಯದರ್ಶಿ ಡಾ. ಶ್ರೀಕಾಂತ್ ಹೆಗ್ಡೆ ವಂದಿಸಿದರು.ಡಾ ಮಧುರ ಭಟ್ ಮತ್ತು ಡಾ. ಪ್ರಥ್ವೀಶ್ ಹುಲೆಕಲ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News