ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ಯುವಕ ನಾಪತ್ತೆ

Update: 2023-11-21 17:01 GMT

ಬಜ್ಪೆ, ನ.21: ಯುವಕನೋರ್ವ ಪೊಳಲಿ ಸೇತುವೆ ಬಳಿ ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿರುವ ಘಟನೆ ವರದಿಯಾಗಿದೆ.

ಕಾವೂರು ಆಕಾಶಭವನ ನಿವಾಸಿ ಪ್ರಭಾಕರ ಆಚಾರಿ ಎಂಬವರ ಪುತ್ರ ಪ್ರಶಾಂತ್ ಕುಮಾರ್(41) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ.

ಮಂಗಳವಾರ ಬೆಳಗ್ಗೆ ತನ್ನ ಗೆಳೆಯರೊಂದಿಗೆ ಪೊಳಲಿ ದೇವಸ್ಥಾನಕ್ಕೆ ತೆರಳಿದ್ದ ಪ್ರಶಾಂತ್‌ ಆಚಾರಿ, ನದಿಗೆ ಇಳಿದು ಸ್ನಾನ ಮಾಡಿದ್ದರು. ಆ ಬಳಿಕ ಅವರ ಶೂವೊಂದರ ದಾರ ನೀರಿನಲ್ಲಿ ಹೋಗಿತ್ತು. ಅದನ್ನು ಹೆಕ್ಕಲೆಂದು ನೀರಿಗೆ ಇಳಿದಿದ್ದ ವೇಳೆ ಅವರು ನದಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದಾಕ್ಷಣ ಸ್ಥಳಕ್ಕಾಗಮಿಸಿದ ಸ್ಥಳಕ್ಕಾಗಮಿಸಿದ ಬಜ್ಪೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದ್ದು, ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News