ಬಂಟ್ವಾಳ | ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ: ಎಂಡಿಎಂಎ ವಶ

Update: 2024-02-08 08:21 GMT

ಬಂಟ್ವಾಳ, ಫೆ.8: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಚಿ ಗ್ರಾಮ ನಿವಾಸಿಗಳಾದ ಅಬ್ದುಲ್ ರಹೀಝ್ ಹಾಗೂ ದಾವೂದುಲ್ ಅಮೀರ್ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೋರ್ವ ಆರೋಪಿ ಬಂಟ್ವಾಳ ನಿವಾಸಿ ನಝೀರ್ ಪರಾರಿಯಾಗಿದ್ದಾನೆ. ಬಂಧಿತರಿಂದ ಸುಮಾರು 4 ಸಾವಿರ ರೂ. ಮೌಲ್ಯದ 4 ಗ್ರಾಂ 04 ಮಿ.ಗ್ರಾಂ.ತೂಕದ ಎಂಡಿಎಂಎ ವಶಕ್ಕೆ ಪಡೆಯಲಾಗಿದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ತಂಡ ತಲಪಾಡಿ ಬಳಿಯ ಬ್ರಹ್ಮರಕೂಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದ್ದಾರೆ. ಈ ವೇಳೆ ಓರ್ವ ಬೈಕಿನಿಂದ ಹಾರಿ ಪರಾರಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಸಂಶಯಗೊಂಡ ಪೊಲೀಸರು ಉಳಿದಿಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಡ್ರಗ್ಸ್ ಸೇವನೆ ಮಾಡಿದ್ದ ಆರೋಪಿಗಳ ಬಳಿ ಎಂಡಿಎಂಎ ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News