ಬಂಟ್ವಾಳ : "ಕೋಟಿ - ಚೆನ್ನಯ ಕ್ರೀಡೋತ್ಸವ 2025" ಲಾಂಛನ, ಆಮಂತ್ರಣ ಪತ್ರ ಬಿಡುಗಡೆ

Update: 2024-12-09 06:47 GMT

ಬಂಟ್ವಾಳ : ಬಂಟ್ವಾಳ ‌ತಾಲೂಕು‌ ಬಿಲ್ಲವ ಸೇವಾ ಸಂಘ ಹಾಗೂ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜ.19 ರಂದು ನಡೆಯುವ ತಾಲೂಕು ಮಟ್ಟದ "ಕೋಟಿ - ಚೆನ್ನಯ ಕ್ರೀಡೋತ್ಸವ 2025" ಇದರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮಬಂಟ್ವಾಳ : ಬಂಟ್ವಾಳ ‌ತಾಲೂಕು‌ ಬಿಲ್ಲವ ಸೇವಾ ಸಂಘ ಹಾಗೂ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜ.19 ರಂದು ನಡೆಯುವ ತಾಲೂಕು ಮಟ್ಟದ "ಕೋಟಿ - ಚೆನ್ನಯ ಕ್ರೀಡೋತ್ಸವ 2025" ಇದರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಭಾನುವಾರ ನಡೆಯಿತು.

ಬಂಟ್ವಾಳ ‌ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗುರುಕೃಪಾ ಸಂಜೀವ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲಾಂಛನ ಬಿಡುಗಡೆಗೊಳಿಸಿದ ಉದ್ಯಮಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ.ಸುವರ್ಣ ಮಾತನಾಡಿ, ಕ್ರೀಡೋತ್ಸವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಮನವಿ ಮಾಡಿದರು.

ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಮಾರ್ನಬೈಲು, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ, ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಪ್ರಚಾರ ಸಮಿತಿ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್ ,ಕೋಶಾಧಿಕಾರಿ ಆನಂದ ಶಂಭೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೋಟಿ ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಸಂಚಾಲಕ ಬೇಬಿ ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ ವಂದಿಸಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News