ಬಂಟ್ವಾಳ : ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಸವಾರ ಮೃತ್ಯು

Update: 2024-12-06 08:55 GMT

ಬಂಟ್ವಾಳ : ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಬಿ.ಸಿ.ರೊಡು - ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಬಾಂಬಿಲದಲ್ಲಿ ಗುರುವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ರಾಜೇಂದ್ರ ಪೂಜಾರಿ (45) ಮೃತಪಟ್ಟವರು. ಬಿ.ಸಿ.ರೋಡಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಬಸ್ಸು ಬೆಳ್ತಂಗಡಿ ಭಾಗದಿಂದ ಮಂಗಳೂರಿಗೆ ತೆರಳುತ್ತಿತ್ತು.

ಮೃತ ರಾಜೇಂದ್ರ ಅವರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ಸು- ಬೈಕ್ ಢಿಕ್ಕಿ ಹೊಡೆದ ಜಾಗದ ಅನತಿ ದೂರದಲ್ಲಿ ಬುಧವಾರ ಸಂಜೆ ಕಾರು ಹಾಗೂ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟು, ಇತರ ಪ್ರಯಾಣಿಕರು ಗಾಯಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News