ಬಂಟ್ವಾಳ | ಮಿನಿ ಲಾರಿ - ಸ್ಕೂಟರ್ ಮಧ್ಯೆ ಅಪಘಾತ: ಯುವಕ ಮೃತ್ಯು

Update: 2024-07-07 06:56 GMT

ಬಂಟ್ವಾಳ, ಜು.7: ಗೂಡ್ಸ್ ಮಿನಿ ಲಾರಿ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ - ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಶನಿವಾರ ಸಂಜೆ ನಡೆದಿದೆ.

ಮೃತರನ್ನು ಕಾಸರಗೋಡು ಬೇಕಲ ನಿವಾಸಿ ಸುಮಿತ್ (24) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರ ಗುರುಪ್ರೀತ್ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಪುಂಜಾಲಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಎದುರು ಕಡೆಯಿಂದ ಬರುತ್ತಿದ್ದ ಮಿನಿ ಲಾರಿ ಪಿಕಪ್ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಢಿಕ್ಕಿ ಹೊಡದಿದೆ ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಸುಮಿತ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News