ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ

Update: 2023-10-14 08:20 GMT

ಬಂಟ್ವಾಳ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಎಂದು ಗುರುತಿಸಲಾಗಿದೆ.

ಫರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಗಳು  ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು.

ಇದೀಗ ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್ ಬಿ. ಹಾಗೂ ಪೋಲಿಸ್ ಉಪ ನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News