ಬಂಟ್ವಾಳ: ಅಬ್ದುಲ್ಲಾ ಕೆದಿಲ ನಿಧನ
Update: 2023-07-15 04:46 GMT
ಬಂಟ್ವಾಳ : ಅಮ್ಟೂರು ಗ್ರಾಮದ ಕೆದಿಲ ನಿವಾಸಿ ಅಬ್ದುಲ್ಲಾ (65) ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಪರಿಸರದಲ್ಲಿ ಜನಾನುರಾಗಿಯಾಗಿ ಇಚ್ಚ ಎಂಬ ಹೆಸರಿನಲ್ಲಿ ಚಿರಪರಿಚಿತರಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.