ಬಂಟ್ವಾಳ : ಅಂಬುಲೆನ್ಸ್- ಕಾರು ಮುಖಾಮುಖಿ ಢಿಕ್ಕಿ
Update: 2023-10-31 16:42 GMT
ಬಂಟ್ವಾಳ : ಅಂಬುಲೆನ್ಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ ವಾಹನಗಳೆರಡು ಜಖಂಗೊಂಡ ಘಟನೆ ಮಾಣಿ - ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದೆ.
ಅಪಘಾತದಿಂದ ಯಾವುದೇ ಜೀವ ಹಾನಿಯಾಗಿಲ್ಲ, ವಾಹನಗಳೆರಡು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.