ಬಂಟ್ವಾಳ: ಬೈಕ್ ಕಳವು; ದೂರು ದಾಖಲು

Update: 2024-06-13 09:34 GMT

ಬಂಟ್ವಾಳ : ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ.

ಅಮ್ಟೂರು ಗ್ರಾಮದ ಕರಿಂಗಾನ ನಿವಾಸಿ ಅಬ್ದುಲ್ ಮನಾಫ್ ಅವರಿಗೆ ಸೇರಿದ ಬಜಾಜ್ ಪಲ್ಸರ್ ಬೈಕ್ ಕಳವಾಗಿದ್ದು, ಇವರು ಜೂನ್ 10 ರಂದು ರಾತ್ರಿ ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದರು ಎನ್ನಲಾಗಿದೆ.

ಜೂನ್ 11 ರಂದು ಬೆಳಿಗ್ಗೆ ಬಂದು ನೋಡುವಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ಬೈಕಿನ ಅಂದಾಜು ಮೌಲ್ಯ 50 ಸಾವಿರ ರೂಪಾಯಿ ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News