ಬಂಟ್ವಾಳ : ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು
ಬಂಟ್ವಾಳ : ಇಲ್ಲಿಗೆ ಸಮೀಪದ ಕಾಮಾಜೆ ಕ್ರಾಸ್ ಬಳಿ ಬೈಕ್ ಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ ಮೃತಪಟ್ಟ ವ್ಯಕ್ತಿ.
ವಾಮದಪದವನಿಂದ ಅವರು ಬಿ.ಸಿ.ರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಶ್ರೀನಿವಾಸ ಅವರು ಬಂಟ್ವಾಳ ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಮೃತರು ಅಡುಗೆ ವೃತ್ತಿಯವರಾಗಿದ್ದು, ದೇವಸ್ಥಾನದಲ್ಲಿ ಪರಿಚಾರಕಾಗಿದ್ದರು. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ, ಪುತ್ರ, ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.