ಬಂಟ್ವಾಳ : ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು
Update: 2024-02-01 14:44 GMT
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಧ್ವ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ಸಚಿನ್ ಗೌಡ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಿ.ಸಿ.ರೋಡ್ ಕಡೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಬೈಕ್ ಸವಾರ ಸಚಿನ್ ಗೌಡ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.